ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ.
ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ.
ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹುಚ್ಚುನಾಯಿಯನ್ನು ಸಾರ್ವಜನಿಕರು ಹೊಡೆದು ಕೊಂದಿದ್ದು, ಈ ಬಗ್ಗೆ ಪಟ್ಟಣ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ.


























