ಪುತ್ತೂರು: ದ.ಕ., ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ ಕುಮಾರ್ ರವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಭಯ ಜಿಲ್ಲೆಗಳ ಸಹಕಾರಿ ಧುರೀಣರುಗಳು ಚುನಾವಣೆಗೆ ಸ್ಪಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸ್ಪರ್ಧೆಯ ನಿರ್ಧಾರ ಮಾಡಿದ್ದರು. ನ.16ರಂದು ಅವರ ಚುನಾವಣಾ ಕಚೇರಿ ಮಂಗಳೂರಿನಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತ್ತು. ಆದರೆ ಇದೀಗ ಅವರು ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.




























