ಪುತ್ತೂರು: ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದರೆನ್ನಲಾದ ವಿದ್ಯಾರ್ಥಿಗಳನ್ನು ಪೊಲೀಸರು ವಿದ್ಯಾರ್ಥಿಗಳ ಮನೆಗೆ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.
ಕೊಂಬೆಟ್ಟು ಕಾಲೇಜಿನ ಆವರಣದ ಹೊರಗಡೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ವಿದ್ಯಾರ್ಥಿಗಳನ್ನು ಅಪ್ರಾಪ್ತರೆಂಬ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಮಕ್ಕಳ ಮತ್ತು ಮಹಿಳೆಯರ ಆಪ್ತ ಸಮಾಲೋಚನಾ ಆಸರೆ ಎಂಬ ವಿಭಾಗಕ್ಕೆ ನಗರ ಪೊಲೀಸ್ ಠಾಣೆಯ ಪೊಲೀಸರು ಕರೆತಂದಿದ್ದು, ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮಾಡಿದ ಬಳಿಕ ಅವರನ್ನು ಅವರವರ ಮನೆಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ ಎಂದು ವರದಿಯಾಗಿದೆ..