ಮಂಗಳೂರು: ಕೆಲವು ತಿಂಗಳುಗಳಿಂದ ಮಂಗಳೂರಿನ ಹಲವು ನಾಗಬನಗಳನ್ನು ಅಪವಿತ್ರಗೊಳಿಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘಿಸಿ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರೊಂದಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರಮುಖರು ಸೇರಿ ಕಮಿಷನರ್ ಮತ್ತು ಪೊಲೀಸ್ ಸಿಬ್ಬಂದಿಗಳನ್ನು ಅಭಿನಂದಿಸಿದರು.
ನಾಗಬನಕ್ಕೆ ಹಾನಿಗೊಳಿಸಿದ ಪ್ರಕರಣವೂ ಹಲವು ದಿನಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದು,ಈ ಪ್ರಕರಣದ ಎಂಟು ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ಈ ವಿವಾದಗಳಿಗೆ ತೆರೆ ಎಳೆದಿದ್ದಾರೆ..