ನೆಲ್ಯಾಡಿ: ರಸ್ತೆ ಬದಿಯಲ್ಲಿರುವ ಮೈಲ್ ಸ್ಟೋನ್ ಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯ ಕೋಲ್ಪೆಯಲ್ಲಿ ನಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಕಾರು ಕೇರಳ ರೆಜಿಸ್ಟರಿದಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.