ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಮಿನಿ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೋಡಿಂಬಾಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಮತ್ತು ಮಿನಿ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, ಲಘು ಅಪಘಾತದಲ್ಲಿ ಯಾವುದೇ ಭೀಕರ ತೊಂದರೆಗಳು ಉಂಟಾಗಿಲ್ಲ ಎನ್ನಲಾಗಿದೆ.
ಮಿನಿ ಟೆಂಪೋ ವಾಹನವು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸ್ಪಲ್ಪ ಸಮಯ ಟ್ರಾಫಿಕ್ ಜಾಮ್ ಕೂಡ ಸಂಭವಿಸಿತ್ತು.