ಪುತ್ತೂರು: ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಂ ಹ್ಯಾರೀಸ್, ಮೊಹಮ್ಮದ್ ಆದಿಲ್, ಇರ್ಫಾನ್, ಮೊಹಮ್ಮದ್ ಮುಸ್ತಫಾ,ಮೊಹಮ್ಮದ್ ಅಸ್ಪಾಕ್, ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಡಿ.02 ರಂದು ಬೆಳಿಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪುತ್ತೂರು ಬಸ್ ನಿಲ್ದಾಣದ ಬಳಿ ಸುಮಾರು 6-7 ಮಂದಿ ವ್ಯಕ್ತಿಗಳು ಪರಸ್ಪರ ದೂಡಾಡಿಕೊಂಡು, ಮಾತಿನ ಚಕಮಕಿ ನಡೆಸುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಹಾಗೂ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಠಾಣೆ ಠಾಣೆಯಲ್ಲಿ ಅ.ಕ್ರ 102/2021 ಕಲಂ 160 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.