ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾರಂದಕ್ಕುಕ್ಕು ಎಂಬಲ್ಲಿ ನಡೆದಿದೆ.
ಮೃತರನ್ನು ದಾರಂದಕ್ಕುಕ್ಕು ನಿವಾಸಿ ಭಾಸ್ಕರ್ ಪ್ರಭು ರವರ ಪತ್ನಿ ಆಶಿಕಾ(20) ಎನ್ನಲಾಗಿದೆ.
ಆಶಿಕಾ ರವರಿಗೆ ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಮೃತರು ಪತಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.