ಪುತ್ತೂರು: ಪಾದಚಾರಿ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಪೋಲಿಸ್ ಠಾಣೆಯ ಮುಂಭಾಗ ಡಿ.3 ರಂದು ರಾತ್ರಿ ನಡೆದಿದೆ.
ಡಿ.3 ರಂದು ರಾತ್ರಿ ನಡೆದುಕೊಂಡು ಮನೆಗೆ ಹೋಗುತಿದ್ದ ಚಿಕ್ಕಪುತ್ತೂರು ನಿವಾಸಿ ಖಾಸಗಿ ಬಸ್ ನಿರ್ವಾಹಕ ಕೇಶವ ಎನ್ನುವವರಿಗೆ ಜ್ಯೂಪಿಟರ್ ವಾಹನವೊಂದು ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ
ಕೇಶವ ಅವರ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಧಿಕ ರಕ್ತಸ್ರಾವವಾಗಿರುವುದರಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.