ಸುಳ್ಯ: ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ಎಂಬಲ್ಲಿ ನಡೆದಿದೆ.
ಮೃತ ಸವಾರನನ್ನು ಕಂದಡ್ಕ ನಿವಾಸಿ ವಿನೋದ್ ಕುಮಾರ್ ಎನ್ನಲಾಗಿದೆ.
ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.