ಬಂಟ್ವಾಳ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿರುವ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಾಲಯ ಕೇಪು ಇಲ್ಲಿನ ಮೇಲ್ವಿಚಾರಕರಾದ ಭವ್ಯ ರವರಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇಲ್ಲಿನ ಮುಖ್ಯ ಗ್ರಂಥಾಲಯಾಧಿಕಾರಿಯಾದ ಗಾಯತ್ರಿ ಮತ್ತು ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.