ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಆರಾಧ್ಯ ದೈವ ಕೊರಗಜ್ಜನನ್ನು ವಿಕೃತವಾಗಿ ಇಮೋಜಿಗಳನ್ನು ಶೇರ್ ಮಾಡಲಾಗಿದ್ದು, ಇದು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ.
ಹಂಕರ ಜಾಲು ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಕೊರಗಜ್ಜನ ಬಗ್ಗೆ ಅವಹೇಳಕಾರಿಯಾಗಿ ಸ್ಟಿಕ್ಕರ್ ಮಾಡಿ ಪೋಸ್ಟ್ ಮಾಡಲಾಗಿದೆ.
ಜಾನ್ ಅಲೆನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಕೊರಗಜ್ಜನ ಭಾವಚಿತ್ರವನ್ನು ಅಶ್ಲೀಲವಾದ ಫೊಟೋಗಳಿಗೆ ಅಂಟಿಸಿ ಅದನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿ ವಿಕೃತಿ ಮೆರೆದಿದ್ದಾನೆ.
ಈ ಚಿತ್ರ ಹಳೆಯದ್ದೋ ಅಥವಾ ಈಗಿನದ್ದೋ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸದ್ಯ ಈ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗಿ ಮತ್ತೆ ಸುದ್ದಿಯಾಗುತ್ತಿದೆ. ಈ ಬಗ್ಗೆ ಭಾರೀ ವಿರೋಧ ಕೇಳಿಬಂದಿದ್ದು, ಆತನನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.