ಉಳ್ಳಾಲ: ಸವಾರನ ನಿಯಂತ್ರಣ ತಪ್ಪಿ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ.
ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ.
ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.