ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ದಾರುಣ ಘಟನೆ ಮೋರ್ಗನ್ಸ್ ಗೇಟ್ ಬಳಿ ನಡೆದಿದೆ.
ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8 ) ಸಮರ್ಥ್ (4 ) ಎನ್ನಲಾಗಿದೆ.
ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು. ನಾಗೇಶ್ ಡ್ರೈವರ್ ರಾಗಿ ಕೆಲಸ ನಿರ್ವಹಿಸುತ್ತಿದ್ದರೆ , ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನಾಗೇಶ್ ರವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂಗಳೂರು ನಗರ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.