ಪುತ್ತೂರು: ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾದ ಘಟನೆ ನೇರಳಕಟ್ಟೆ ಸಮೀಪದ ಬಾಯಿಲ ಎಂಬಲ್ಲಿ ನಡೆದಿದೆ.
ವಾರೀಸುದಾರರು ಇದ್ದಲ್ಲಿ ರೈಲ್ವೇ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಗೆ ಸುಮಾರು 40 ವರ್ಷ ಪ್ರಾಯವಾಗಿದ್ದು, ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.