ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ನಡೆದಿದೆ.
ಸಂಗೀತಾ (26) ನೇಣಿಗೆ ಶರಣಾದ ಗೃಹಿಣಿಯಾಗಿದ್ದು, ಗಂಡ ವಿನಯ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೂ ಮುನ್ನ ಸಂಗೀತಾ ಡೆತ್ ನೋಟ್ ಬರೆದಿಟ್ಟಿದ್ದಾರಂತೆ.
ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ದಂಪತಿಗಳಿಬ್ಬರು, ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಪತಿ ವಿನಯ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.