ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಘಟನೆಗೆ ಸಂಬಂಧಿಸಿ ಪಿಎಫ್‌ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ರ‍್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಘಟನೆಯನ್ನು ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ ನಗರದ ಕ್ಲಾಕ್ ಟವರ್‌ನಿಂದ ಎಸ್ಪಿ ಕಚೇರಿಗೆ ಚಲೋ (ರ‍್ಯಾಲಿ) ನಡೆಸಲಾಗುವುದು ಎಂದು ಪಿಎಫ್‌ಐ ತಿಳಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಡಿ.17ರ ರ‍್ಯಾಲಿಗೆ ಅವಕಾಶವಿಲ್ಲ ಎಂದಿದ್ದಾರೆ.
ಪೊಲೀಸ್ ಇಲಾಖೆಯು ರ‍್ಯಾಲಿ ನಡೆಸಲು ಅವಕಾಶ ನಿರಾಕರಿಸಿದರೂ ಪ್ರತಿಭಟನೆ ನಡೆಸಲು ನಿರ್ಬಂಧ ವಿಧಿಸಿಲ್ಲ. ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.