ಪುತ್ತೂರು: ಮುಂಡೂರು ಗ್ರಾಮದ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜ.19ರಿಂದ 24 ರವರೆಗೆ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.18 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶಾಸಕರು, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿರುವ ಸಂಜೀವ ಮಠಂದೂರು ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಅನುದಾನ ನೀಡಿದ್ದೇನೆ. ಅನುದಾನದ ಇನ್ನೂ ಕೂಡ ನಿರೀಕ್ಷೆಗಳಿವೆ. ಮುಂದಿನ ಆರ್ಥಿಕ ವರ್ಷದಲ್ಲಿ ಇನ್ನಷ್ಟು ಅನುದಾನ ನೀಡಿ ಭಗವಂತನ ಸೇವೆ ಮಾಡಲು ಬದ್ಧನಾಗಿರುವುದಾಗಿ ತಿಳಿಸಿದರು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಯಾವುದೇ ಜಾತಿ, ಪಕ್ಷ ಬೇಧವಿಲ್ಲದೇ ಇರುವ ದೇವಸ್ಥಾನದ ಬ್ರಹ್ಮಕಲಶೋತ್ಸವವು ಸಾಮಾಜಿಕ, ಧಾರ್ಮಿಕವಾಗಿ ಎಲ್ಲಾ ರೀತಿಯ ಔನತ್ಯಗಳನ್ನು ಹೊಂದಿರುವ ಸಮಯವಾಗಿದೆ. ದೇವರ ಬ್ರಹ್ಮಕಲಶೋತ್ಸವದಲ್ಲಿ ಎಲ್ಲಿಯೂ ಕೊರತೆ ಉಂಟಾಗದೆ ಅಕ್ಷಯವಾಗಿ ನಡೆಯಲು ದೇವರು ಅನುಗ್ರಹಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣ್ ಕುಮಾರ ಆಳ್ವ ಬೋಳೋಡಿಗುತ್ತು, ಸದಸ್ಯರಾದ ರುಕ್ಮನಾಯ್ಕ, ಸದಾಶಿವ ರೈ ಪೊಟ್ಟಮೂಲೆ, ಪ್ರಕಾಶ್ ಪುತ್ತೂರಾಯ ಆಲಡ್ಕ, ಭಾಸ್ಕರ ರೈ ಕೆದಂಬಾಡಿಗುತ್ತು, ವಿಶ್ವನಾಥ ರೈ ಕುಕ್ಕುಂಜೋಡು, ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ಸುರೇಶ್ ಕಣ್ಣಾರಾಯ ಬನೇರಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಶಿವರಾಮ ಗೌಡ ಇದ್ಯಪೆ, ಜಯಾನಂದ ರೈ ಮಿತ್ರಂಪಾಡಿ, ಕೋಶಾಧಿಕಾರಿ ರತನ್ ಕುಮಾರ್ ರೈ, ಗೌರವ ಸಲಹೆಗಾರರಾದ ಚಂದ್ರಹಾಸ ರೈ ಬೋಳೋಡಿಗುತ್ತು, ರಾಮಯ್ಯ ರೈ ಎನ್. ತಿಂಗಳಾಡಿ, ಸ್ವಾಗತ ಸಮಿತಿ ಸಂಚಾಲಕರಾದ ಸದಾಶಿವ ರೈ ದಂಬೆಕ್ಕಾನ, ಸುಭಾಷ್ ರೈ ಕಡಮಜಲು, ಸದಸ್ಯ ಐ.ಸಿ ಕೈಲಾಸ್ ಗೌಡ, ರತ್ನಾಕರ ರೈ ಕೆದಂಬಾಡಿಗುತ್ತು, ಆಹಾರ ಸಮಿತಿ ಸಹಸಂಚಾಲಕ ಸದಾಶಿವ ಶೆಟ್ಟಿ ಪಟ್ಟೆ, ಚಪ್ಪರ ಸಮಿತಿ ಸಹಸಂಚಾಲಕ ಉಮೇಶ್ ನಾಯ್ಕ ಬೋಳೋಡಿ, ಮುಂಡಾಳಗುತ್ತು ಮೋಹನ ಆಳ್ವ, ರಾಜೇಶ್ ರೈ ಪರ್ಪುಂಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.