ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.25 ರಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು (Gramapanchayat secretary com rural development assistant G2) ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರು(Second Division account assistant) ಹುದ್ದೆಗಳ ನೇಮಕಾತಿ ವಿಧಾನ/ಲಿಖಿತ ಪರೀಕ್ಷಾ ಪಠ್ಯಕ್ರಮ /ಲಿಖಿತ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತಂತೆ ಉಚಿತ ತರಬೇತಿ ಕಾರ್ಯಗಾರವು ಬೆಳಿಗ್ಗೆ 10.00ರಿಂದ ಮದ್ಯಾಹ್ನ 3.00ವರೆಗೆ ನಡೆಯಲಿದೆ.
ಕರ್ನಾಟಕ ಸರ್ಕಾರ 2019 ಜೂನ್ 21ರಂದು ರಾಜ್ಯ ಪತ್ರ ದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಸೂಚನೆಯಂತೆ ಸದ್ಯದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಗೆ ಅಧಿಸೂಚನೆ ಹೊರಡಿಸಬಹುದು. ಈ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿ ಪೂರ್ವ ತಯಾರಿಯನ್ನು ಮಾಡಿಕೊಳ್ಳಲು ಉತ್ತೇಜಿಸುವ ದೃಷ್ಟಿಯಿಂದ ವಿದ್ಯಾಮಾತಾ ಅಕಾಡೆಮಿಯು ಈ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಂಡಿದೆ.
ಈ ಕಾರ್ಯಾಗಾರದಲ್ಲಿ ಪಿ.ಯು.ಸಿ ಮತ್ತು ಪದವಿ ಮುಗಿಸಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವನ್ನು ನೀಡಲಾಗಿದ್ದು, ಈ ಕಾರ್ಯಾಗಾರಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಹೆಸರು ನೋಂದಾಯಿಸಲು ಬೆಳಿಗ್ಗೆ 10.00 ರಿಂದ ಸಾಯಂಕಾಲ 4.00ರ ನಡುವೆ 9148935808 ಈ ನಂಬರ್ ಗೆ ಕರೆ ಮಾಡಿ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ /ಈ ಕೆಳಗಿನ ವಿಳಾಸದಲ್ಲಿ ಖುದ್ದಾಗಿ ಹೆಸರನ್ನು ದಿನಾಂಕ 22.12.2021ರ ಒಳಗಾಗಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿ ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ /ತರಬೇತಿ ಕೇಂದ್ರ,ಹಿಂದೂಸ್ತಾನ್ ಕಾಂಪ್ಲೆಕ್ಸ್, ಎಪಿಎಂಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು-574201 ಫೋನ್ ನಂ:9148935808 /8590773486/9448527606 ಸಂಪರ್ಕಿಸ ಬಹುದಾಗಿದೆ.