ಉಪ್ಪಿನಂಗಡಿ: ಪೊಲೀಸರ ಮೇಲೆ ದಾಳಿ ನಡೆಸಿದ ಪಿಎಫ್ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸು ದಾಖಲಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಮಹೇಶ್ ಬಜತ್ತೂರು ಬಜರಂಗದಳ ಪುತ್ತೂರು ಜಿಲ್ಲಾ ಗೋರಕ್ಷಾ ಪ್ರಮುಖ,ಶೈಲೇಶ್ ಉಳ್ಳಾಲ,ಉಪ್ಪಿನಂಗಡಿ ಬಜರಂಗದಳ ಸಂಚಾಲಕ ರವಿ ರವಿನಂದನ್ ಇಳಂತಿಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು.