ಬೆಂಗಳೂರು: ವಿರೋಧ ಪಕ್ಷ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಈ ನಡುವೆ ಮಸೂದೆಯನ್ನು ನಮ್ಮ ಸರ್ಕಾರ ಬಂದ್ರೆ ರದ್ದುಗೊಳಿಸ್ತಿವಿ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆರೋಗ್ಯ ಸಚಿವ ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಧಿಕಾರಕ್ಕೆ ಬಂದ ಒಂದು ವಾರದ ಒಳಗೆ ಮತಾಂತರ ನಿಷೇಧ ಕಾಯ್ದೆ ಕಿತ್ತುಹಾಕ್ತೀವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಅವರು ಅಧಿಕಾರಕ್ಕೆ ಬರಲ್ಲ, ಮಸೂದೆ ರದ್ದಾಗಲ್ಲ ಎಂದು ಟಾಂಗ್ ನೀಡಿದ್ದಾರೆ. ಅವ್ರು ಅಧಿಕಾರಕ್ಕೆ ಬರಲ್ಲ ಎಂದು ಗೊತ್ತು ಹೀಗಾಗಿ ಈ ರೀತಿಯ ಹೇಳಿಕೆಗಳನ್ನ ನೀಡ್ತಿದ್ದಾರೆ ಎಂದು ಸುಧಾಕರ್ ಟೀಕಿಸಿದ್ದಾರೆ.