ವಿಟ್ಲ: ಪಡಿಬಾಗಿಲು ಶಾಲೆಯಲ್ಲಿ ಎಲ್. ಕೆ. ಜಿ. ಯು.ಕೆ.ಜಿ. ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿಯವರು ನೀಡಿದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಮತ್ತು ಪೋಷಕರ ಸಭೆ ಡಿ.28 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜಿನಚಂದ್ರಜೈನ್, ಸಂಚಾಲಕರಾದ ಬಾಲಕೃಷ್ಣ ಕಾರಂತ, ಕೇಪು ಗ್ರಾಮ ಪಂಚಾಯಿತಿ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ ,ಕೋಶಾಧಿಕಾರಿ ಐತಪ್ಪ ನಾಯ್ಕ್, ಸಿ.ಆರ್.ಪಿ. ಪುಷ್ಪ, ಮುಖ್ಯ ಶಿಕ್ಷಕಿ ಶಶಿಕಲಾ ಮತ್ತು ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ವೇದಿಕೆಯಲ್ಲಿದ್ದ ಗಣ್ಯರು ಮಕ್ಕಳಿಗೆ ಸಮವಸ್ತ್ರ ವಿತರಿಸಿದರು ಹಾಗೂ ಮಕ್ಕಳ ಪ್ರಗತಿ ಬಗ್ಗೆ ಚರ್ಚಿಸಿದರು. ವಿದ್ಯಾಸಿರಿ ಶಿಕ್ಷಣ ಕೇಂದ್ರದ ಸಹ ಶಿಕ್ಷಕಿ ನವ್ಯ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶಶಿಕಲಾ ಎನ್. ಪ್ರಾಸ್ತಾವಿಕನುಡಿಗಳನ್ನಾಡಿದರು. ವಿದ್ಯಾಸಿರಿ ಶಿಕ್ಷಣ ಕೇಂದ್ರದ ಶಿಕ್ಷಕಿ ಜಯಶ್ರೀ ಕೆ ಕಾರ್ಯಕ್ರಮ ನಿರೂಪಿಸಿ, ಧನ್ಯವಾದಗೈದರು.