ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬ್ರೆಝಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ನಡೆದಿದೆ.
ಅಪಘಾತದಿಂದಾಗಿ ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ತಮಿಳುನಾಡು ಮೂಲದವರಿದ್ದ ಬ್ರೆಝಾ ಕಾರು ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಟ್ರಾವೆಲ್ಲರ್ ನಲ್ಲಿದ್ದ ಒಟ್ಟು ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


























