ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ವಿಟ್ಲದಲ್ಲಿ ನಡೆಯಿತು.
ಇತ್ತೀಚೆಗೆ ನಡೆದ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ 18 ವಾರ್ಡ್ ಗಳಲ್ಲಿ 12 ವಾರ್ಡ್ ಗಳನ್ನು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಪಟ್ಟಣ ಪಂಚಾಯತ್ ಆಡಳಿತ ಬಿಜೆಪಿ ತೆಕ್ಕೆಗೆ ಬಂದಿದೆ.
ವಿಟ್ಲ ಜೈನ ಬಸದಿ ವತಿಯಿಂದ ಬ್ಯಾಂಡ್, ವಾದ್ಯ, ಚೆಂಡೆ ಗಳೊಂದಿಗೆ ವಿಟ್ಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿದೆ.
ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ವಿವಿಧ ಕ್ಷೇತ್ರದ ಬಿಜೆಪಿ ಮುಖಂಡರು ಮತ್ತು ಅಭ್ಯರ್ಥಿಗಳು ಉಪಸ್ಥಿತರಿದ್ದರು.






























