ಪುತ್ತೂರು : ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್‌ನಲ್ಲಿ ಬಾಡಿಗೆದಾರರೊಬ್ಬರು
ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ.
ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಳ್ಯದ ಬೆನಕ ಹಾಸ್ಟೆಲ್‌ನಲ್ಲಿ ಪಲ್ಲತ್ತೂರಿನ ಮೊಯಿದ್ದೀನ್ ಕುಂಞ್ಞ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು. ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು. ಕೊಠಡಿಯನ್ನು ತಪಾಸಣೆ ಮಾಡುವ
ವೇಳೆ 11 ಕೆ.ಜಿ. ಗಾಂಜಾ ಪತ್ತೆಯಾಗಿದೆ.
ಈ ವೇಳೆ ಮನೆಯೊಳಗಿದ್ದ ಮೊಯಿದ್ದೀನ್ ಕುಂಞ ಪರಾರಿಯಾಗಿದ್ದು, ಸಲಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಯಿದ್ದೀನ್ ಕಾರನ್ನು ಕೂಡ ವಶಕ್ಕೆ ಪಡೆದಿದ್ದು, ಅದರಲ್ಲಿ ಕೂಡಾ 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಅಬಕಾರಿ ಉಪಾಧೀಕ್ಷಕರಾದ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿಗಳಾದ ವಿಜಯ ಕುಮಾರ್, ಪ್ರೇಮಾನಂದ, ಯಲ್ಲಪ್ಪ ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.





























