ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಜ.4 ರಂದು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.
ಪುತ್ತೂರು ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಾಯ ಗೊಂಡಿದ್ದು, ಆಟೋ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸಹ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.






























