ಕಡಬ: ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.5 ರಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ನಡೆದಿದೆ.
ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎನ್ನಲಾಗಿದೆ.
ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಅದೇ ದಾರಿಯಲ್ಲಿ ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಯವರು ಗಾಯಾಳುವನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದರು.
ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.