ಮಂಗಳೂರು: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ,ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫೋಸ್ಟ್ ಮಾಡಿದ್ದಾರೆ.