ಭಟ್ಕಳ: ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರು ಇಲ್ಲದ ಸಮಯ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ.
ಮೃತಳನ್ನು ಕವನ ಮಂಜುನಾಥ ನಾಯ್ಕ(17) ಎನ್ನಲಾಗಿದೆ.
ಕವನ ಉಡುಪಿ ಜಿಲ್ಲೆಯ ಬೈಂದೂರಿನ ಪಿ.ಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಮದ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನ್ನದೇ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಬಗ್ಗೆ ಜಟ್ಟಾ ಸುಬ್ಬಾ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗ್ರಾಮೀಣ ಠಾಣೆ ಪಿ.ಎಸ್.ಐ ಭರತ ನಾಯಕ ಹಾಗೂ ಎ.ಎಸ್ ಮಂಜುನಾಥ ಗೌವಡರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.





























