ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸಮೀಪದ ಮರಕಡಬೈಲ್ ನಿವಾಸಿ ಪ್ರಗತಿಪರ ಕೃಷಿಕ ರವೀಶ್ (46)
ಅಲ್ಪಕಾಲದ ಅನಾರೋಗ್ಯದಿಂದಾಗಿ ನಿಧನರಾದರು.
ರವೀಶ್ ರವರು ತಾಳಿತ್ತನೂಜಿ ಶಾಲಾಭಿವೃದ್ದಿ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದು, ಧಾರ್ಮಿಕ ರಂಗ, ಸಮಾಜ ಸೇವೆ , ಶಿಕ್ಷಣ ರಂಗಗಳಲ್ಲಿ ಕ್ರಿಯಾಶೀಲರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಅಪಾರ ಬಂಧು-ಮಿತ್ರರನ್ನು ಅಗಲಿರುತ್ತಾರೆ.
ರವೀಶ್ ನಿಧನಕ್ಕೆ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ನಿಕಟಪೂರ್ವ ಜಿ.ಪಂಚಾಯತ್ ಸದಸ್ಯ ಎಂ.ಎಸ್ ಮಹಮ್ಮದ್, ಸಿಂಗಾರಿ ಬೀಡಿ ಮಾಲಕರಾದ ಸುಲೈಮಾನ್ ಹಾಜಿ,ಹಮೀದ್ ಕುಲ್ಯಾರು ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.