ಮೂಡುಬಿದಿರೆ: ತಾಲೂಕಿನ ಪುರಸಭಾ ವ್ಯಾಪ್ತಿಯ ಕೀರ್ತಿನಗರದ ರಸ್ತೆ ಬದಿಯಲ್ಲಿ ದನದ ರುಂಡ ಗೋಣಿಚೀಲದಲ್ಲಿ ಪತ್ತೆಯಾಗಿದೆ.
ಘಟನೆ ಇಂದು ಬೆಳಗಿನ ಜಾವ ಪೊಲೀಸರ ಗಮನಕ್ಕೆ ಬಂದಿದೆ. ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ವೇಳೆ ಪ್ಲಾಸ್ಟಿಕ್ ಚೀಲವೊಂದರಲ್ಲಿ ರುಂಡವನ್ನು ತುಂಬಿಸಿ ತಂದು ಇಲ್ಲಿ ತಂದು ಬಿಸಾಡಿ ಹೋಗಿರಬಹುದೆಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ರುಂಡವನ್ನು ಪೊಲೀಸರು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಬಗ್ಗೆ ಮೂಡಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು 48 ಗಂಟೆಯ ಒಳಗೆ ಬಂಧಿಸದಿದ್ದಲ್ಲಿ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.