ಕಡಬ: ತಾಲೂಕಿನ ನೆಲ್ಯಾಡಿಯಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿರುವ ಕಾರಣ ಬ್ಯಾಂಕ್ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಚರಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ನ ಶಾಖೆಯ ಓರ್ವ ಅಧಿಕಾರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ನೆಲ್ಯಾಡಿ ಗ್ರಾಮ ಪಂಚಾಯತ್ ವತಿಯಿಂದ ಬ್ಯಾಂಕ್ ಅನ್ನು ಸ್ಯಾನಿಟೈಜೇಶನ್ ಮಾಡಲಾಗಿದ್ದು, ನಾಳೆ ಎಂದಿನಂತೆ ಬ್ಯಾಂಕ್ ವ್ಯವಹಾರ ನಡೆಯಲಿದೆ ಎಂದು ಬ್ಯಾಂಕಿನ ಸಿಬ್ಬಂದಿಗಳು ತಿಳಿಸಿದ್ದಾರೆ.