ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎನ್ನಲಾಗಿದೆ.
ಭಾಸ್ಕರ್ ಶೆಟ್ಟಿ ಮುಂಬೈನ ಹೋಟೆಲ್ ಉದ್ಯಮಿ ಎಂದು ತಿಳಿದು ಬಂದಿದೆ. ಜ.13 ರಂದು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ತಕ್ಷಣವೇ ಹಳೆಯಂಗಡಿ ಸಮೀಪದ ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಘಟನೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.