ಚೆನ್ನರಾಯಪಟ್ಟಣ: ಬೆಳ್ಳಂಬೆಳಗ್ಗೆ ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಈಶ್ವರಮಂಗಲ ಹಾಗೂ ವಿಟ್ಲ ಮೂಲದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಈಶ್ವರಮಂಗಲ ಸಮೀಪದ ಬಂಟುಕಲ್ಲು ನಿವಾಸಿ ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ದೇವಿಪ್ರಸಾದ್ ಶೆಟ್ಟಿ ಮತ್ತು ವಿಟ್ಲ ಕುಡ್ತಮುಗೆರು ನಿವಾಸಿ ಸುದರ್ಶನ್ ಎನ್ನಲಾಗಿದೆ.
ಬೆಂಗಳೂರಿನಿಂದ ವಿಟ್ಲ ಕಡೆ ಬರುತ್ತಿದ್ದ ವೇಳೆ ಚೆನ್ನರಾಯಪಟ್ಟಣದಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.