ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ವಿಟ್ಲ ಪೊಲೀಸ್ ಠಾಣೆ ಇದರ ಜಂಟಿ ಆಶ್ರಯದಲ್ಲಿ ನಡೆದ ಡಿಸೆಂಬರ್ ತಿಂಗಳ ಅಪರಾಧ ತಡೆ ಮಾಸಾಚರಣೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ವಿಟ್ಲ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್ ಎಚ್.ಇ. ರವರಿಗೆ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಶ್ರೀಜಾ, ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಬಿ ಸಂದೇಶ್ ಶೆಟ್ಟಿ, ಲಯನ್ಸ್ ಜಿಲ್ಲಾ ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ಹಾಗೂ ಪೊಲೀಸ್ ಬಳಗದವರು ಉಪಸ್ಥಿತರಿದ್ದರು.