ಮಂಗಳೂರು: ತೊಕ್ಕೊಟ್ಟು ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸಚಿನ್ ಕೆ ಎಂ (32) ಎನ್ನಲಾಗಿದೆ.
ಸಚಿನ್ ರವರು ಉರ್ವದಲ್ಲಿ ಎಲೆಕ್ಟ್ರಿಕಲ್ ಡೆಕೋರೇಟರಾಗಿ ಕೆಲಸ ಮಾಡುತ್ತಿದ್ದು, ಅವರ ಬೈಕ್ ನೇತ್ರಾವತಿ ಸೇತುವೆ ಬಳಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.