ಪುತ್ತೂರು : ಯುವತಿಯರು ಹೆಚ್ಚಾಗಿರುವ ಬಸ್ ಹತ್ತಿ ಕಿರುಕುಳ ಕೊಡುತ್ತಿದ್ದ ಆರೋಪಿಯೋರ್ವನನ್ನು ಪ್ರಯಾಣಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಮಾ. 8 ರಂದು ಗಡಿಪಿಲದಲ್ಲಿ ನಡೆದಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಹೆಸರಿಸಲಾಗಿದೆ. ಮಾ. 8ರಂದು ಸಂಜೆ ಸವಣೂರು ಮೂಲಕ ಕಡಬ ಹೋಗುತ್ತಿದ್ದ ಬಸ್ ಏರಿದ್ದ ಆತ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ಅಸಭ್ಯವಾಗಿ ವರ್ತಿಸಿದ್ದರು.
ಈ ವಿಷಯ ತಿಳಿದು ಸಂಘಟನೆಯ ಕಾರ್ಯಕರ್ತರು ಬಸ್ ಗಡಪಿಲ ತಲುಪುತಿದ್ದಂತೆ ಬಸ್ ನ್ನು ನಿಲ್ಲಿಸಿ ಆರೋಪಿಯನ್ನು ವಿಚಾರಿಸಿ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಿದರು. ಆರೋಪಿಯನ್ನು ಮಹಿಳಾ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.