ಪುತ್ತೂರು: ಆಕ್ಟಿವಾ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ಜ.27 ರಂದು ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರೆ ಮತ್ತು ಸಹ ಸವಾರೆ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನ ರಾಂಗ್ ಸೈಡ್ ನಿಂದ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಗೊಂಡ ಇಬ್ಬರು ವಿದ್ಯಾರ್ಥಿನಿಯರು ಬಂಟ್ವಾಳ ಮೂಲದವರಾಗಿದ್ದು, ಶಿವಮೊಗ್ಗದಲ್ಲಿ ಕೃಷಿಯ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ ಎನ್ನಲಾಗಿದೆ.