ಪುತ್ತೂರು: ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ಸಮಿತಿಯ ಸಭೆ ಈಶ್ವರಮಂಗಲದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮೂಸನ್ ಹಾಜಿ ಕರ್ನೂರು ವಹಿಸಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡಿನಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರವು ಮಹಾನ್ ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಆರಾಧ್ಯದೈವವಾದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವನ್ನು ಎಸಗಿದೆ ಎಂದು ಹೇಳಿದರು.
ಬಡವರ, ಹಿಂದುಳಿದ ವರ್ಗಗಳ, ದಲಿತ ಹಾಗೂ ಅಲ್ಪಸಂಖ್ಯಾತರನ್ನು ತುಳಿಯುವುದನನ್ನೇ ಸಬ್ ಕಾ ಸಾಥ್ ಸಬ್ಕಾ ವಿಕಾಸ್ ಎಂದು ಮೋದಿ ಸರಕಾರ ತಿಳಿದುಕೊಂಡಿದೆ, ಜನ ವಿರೋಧಿ ಮನೋಭಾವನೆಯ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ರಾಜ್ಯದ ಮತ್ತು ದೇಶದ ಜನರಿಗೆ ನಿರಂತರ ಕಷ್ಟಗಳನ್ನು ನೀಡುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯರು ಜನಸೇವೆಯನ್ನು ಮಾಡುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಿಜೆಪಿಗರು ಜನರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ನೆಟ್ಟಣಿಗೆ ಮೂಡ್ನೂರು ಗ್ರಾಮ ಅಭಿವೃದ್ಧಿಯಲ್ಲಿ ಪುತ್ತೂರಿನಲ್ಲಿ ಮುಂಚೂಣಿಯಲ್ಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರಣ ಎಂದು ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಮಹಾಬಲ ರೈ ಕರ್ನೂರು ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಪಕ್ಷವಾಗಿದ್ದು ಬಿಜೆಪಿ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿದೆ, ಬಿಜೆಪಿ ಜನರಿಗೆ ಮಾಡುತ್ತಿರುವ ದ್ರೋಹದ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಬಿಜೆಪಿಯ ನಿಜ ಬಣ್ಣವನ್ನು ಬಯಲು ಮಾಡಿ, ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಗ್ರಾಮಪಂಚಾಯತ್ ಸದಸ್ಯ ಶ್ರೀರಾಮ ಪಕಳ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಇಬ್ರಾಹಿಂ ಮೈರೋಳು, ಪಂಚಾಯತ್ ಸದಸ್ಯರಾದ ಜಾಫರ್ ಕೋಡಯಡ್ಕ, ಲಲಿತಾ ಪಳ್ಳತ್ತೂರು, ಜಾಫರ್ ಕೋಡಿಯಡ್ಕ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ. ಮಹಮ್ಮದ್, ಸುರೇಶ್ ನಾಯ್ಕ, ಲೋಕಲ್ ಮಹಮ್ಮದ್, ಎಸಿಎಂಸಿ ಅಧ್ಯಕ್ಷರಾದ ಸೂಫಿ ಕರಂನೂರು, ಅಬ್ದುಲ ಮೆಣಸಿನಕಾನ ಉಪಸ್ಥಿತರಿದ್ದರು. ಗಿರೀಶ ರೈ ಮರಕ್ಕಡ ಧನ್ಯವಾದಗೈದರು.
































