ಮಂಗಳೂರು: ಜನತಾ ಕಾಲೋನಿಯ ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವುಗೈದು ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾಟಿಪಳ್ಳದ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ಅಶ್ರಫ್ (24) ಎನ್ನಲಾಗಿದೆ.
ಇಡ್ಯ ಗ್ರಾಮದ ಜನತಾ ಕಾಲನಿಯ ಸರಕಾರಿ ಶಾಲೆಯ ಬಳಿಯ ನಿವಾಸಿ ಸುನೀತಾ ಎಂಬವರು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಆರೋಪಿ 24 ಗ್ರಾಂ ತೂಕದ ಕರಿಮಣಿ ಸರ ಮತ್ತು ಮೊಬೈಲ್ ಕಳವು ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಸೊತ್ತು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.