ಲೋಕೋಪಯೋಗಿ ಇಲಾಖೆಯ ಯೋಜನೆಯಡಿ ಬಜತ್ತೂರು ಗ್ರಾಮದ ಸರ್ವೋದಯ ಪ್ರೌಢಶಾಲೆಯ ಸಂಪರ್ಕ ರಸ್ತೆಗೆ ರೂ.15ಲಕ್ಷ ಅನುದಾನದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾನ್ಯ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಶ್ರೀ ಎಸ್.ಅಂಗಾರ ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಮುಕುಂದ ಬಜತ್ತೂರು, ಪಂಚಾಯತ್ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.