ಮಂಗಳೂರು: ಮಾದಕ ವಸ್ತು ಎಂಡಿಎಂಎ ಅನ್ನು ಕಾಸರಗೋಡಿನಿಂದ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡಿನ ಅಬ್ದುಲ್ ರಹ್ಮಾನ್ ಎನ್ನಲಾಗಿದೆ.
ಈತನಿಂದ 75 ಸಾವಿರ ರೂ. ಮೌಲ್ಯದ ಎಂಡಿಎಂಎ, ಸಾಗಾಟಕ್ಕೆ ಬಳಸಿದ ಕಾರು ಸಹಿತ 3,30,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇಲಾಖೆ ಅಧಿಕಾರಿಗಳು ಮಂಗಳೂರಿನಿಂದ ತಲಪಾಡಿ ಕಡೆಗೆ ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ರೀತಿಯಲ್ಲಿ ಕಾರೊಂದು ರಸ್ತೆ ಬದಿ ನಿಲ್ಲಿಸಿರುವುದು ಗಮನಕ್ಕೆ ಬಂದಿದೆ. ಇವರನ್ನು ವಿಚಾರಿಸಿದಾಗ ಕಾಸರಗೋಡಿನಿಂದ ಮಾದಕ ವಸ್ತುವನ್ನು ಇಲ್ಲಿನ ಕಾಲೇಜು ವಿದ್ಯಾರ್ಥಿಗಳ ಗುರಿಯಾಗಿಸಿ ಮಾರಾಟಕ್ಕೆ ತಂದಿರುವ ಬಗ್ಗೆ ತಿಳಿದುಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.