ಬೆಂಗಳೂರು: ಮಂಡ್ಯದಲ್ಲಿ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್‌ಗೆ ಜಮಾತ್ ಉಲೆಮಾ-ಎ-ಹಿಂದ್ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಟ್ವೀಟ್ ಮಾಡಿದೆ.
ಹಿಜಾಜ್-ಕೇಸರಿ ವಿವಾದ ತಾರಕಕ್ಕೇರಿ ಒಂದು ಕಡೆ ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತಿದ್ದಾಗ ಅವರನ್ನೇ ನೋಡುತ ಮುಸ್ಕಾನ್ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದಳು.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ಬೆನ್ನಲ್ಲೇ ಜಮಾತ್ ಉಲೆಮಾ-ಎ-ಹಿಂದ್ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಇನ್ನು ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿರುವ ಮುಸ್ಕಾನ್ ಖಾನ್, ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತಿತ್ತು ಅದಕ್ಕೆ ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ ಎಂದರು.
#AllahuAkbar@JamiatUlama_in हिजाब मुस्लिम महिलाओं का एक बुनियादी अधिकार है जिससे उन्हें वंचित नहीं किया जा सकता।@JamiatUlama_in announced Reward of Rs. 5 Lakh to BiBi Muskan Khan of PES College Mandya.#KarnatakaHijabRow pic.twitter.com/RZxKDwgOk3
— Jamiat Ulama-i-Hind (@JamiatUlama_in) February 8, 2022