ಬೆಂಗಳೂರು : ಹಿಜಾಬ್ – ಕೇಸರಿ ವಿವಾದ ಸಂಘರ್ಷ ತೀವ್ರ ಸ್ವರೂಪ ಪಡೆದಿರುವ ಹಿನ್ನಲೆಯಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದು, ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.
ಒಂದೆಡೆ ಹೈಕೋರ್ಟ್ ವಿಸ್ತ್ರತ ಪೀಠ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಿ, ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಲಿ. ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಯಾರೊಬ್ಬರೂ ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬ್ ಮತ್ತು ಶಾಲು) ಬಳಸುವಂತಿಲ್ಲ ಎಂದು ಸೂಚಿಸಿದೆ.
ಕೋರ್ಟ್ ಆದೇಶ ಬರುವ ವರೆಗೆ ಶಾಂತಿ ಸುವ್ಯವಸ್ಥೆಗೆ ಭಂಗ ಬರಬಾರದೆಂಬ ಉದ್ದೇಶದಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದೆ.
ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರಿಸ್ಥಿಟಿ ನೋಡಿ ಕಾಲೇಜು ಗಳನ್ನು ತೆರೆಯುವ ನಿರ್ಧಾರ ಮಾಡುತ್ತೇವೆ. ಈ ಬಗ್ಗೆ ನಾಳೆ ಸಭೆ ನಡೆಸಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಹಿಜಾಬ್ ವಿವಾದ ಸಂಘರ್ಷಕ್ಕೆ ತಿರುಗಿದ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಶುಕ್ರವಾರ ಸಂಜೆ ಮಂತ್ರಿಗಳು, ಡಿಸಿ, ಎಸ್ ಪಿ ಮತ್ತು ಶಿಕ್ಷಣ ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.