ಕಾಪು: ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎನ್ನಲಾಗಿದೆ.
ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ ದುಡಿಯುತ್ತಿದ್ದು, ಕೊರೊನಾದಿಂದಾಗಿ ಕಳೆದ 10 ತಿಂಗಳುಗಳಿಂದ ಈಕೆ ಮನೆಯಿಂದಲೇ ಕೆಲಸ ಮಾಡಿಕೊಂಡಿದ್ದಳು.
ಇಂದು ತನ್ನ ತಂದೆ ತಾಯಿ ಇಬ್ಬರೂ ಸುರತ್ಕಲ್‍ಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಕೋಣೆಯಲ್ಲೇ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























