ಬಂಟ್ವಾಳ: 2020 ರಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನನ್ನು ಹೈದರ್ (27) ಎನ್ನಲಾಗಿದೆ.
ಹೈದರ್ ಬಂಟ್ವಾಳದವನೇ ಆಗಿದ್ದು, ಗಾಂಜಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ. ಸದ್ಯ ಈತನನ್ನು ಬಂಟ್ವಾಳ ಡಿವೈಎಸ್.ಪಿ ನೇತೃತ್ವದ ತಂಡ ಬಂಧಿಸಿದ್ದು, ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪಪೊಲೀಸ್ ಅಧೀಕ್ಷಕ ಪ್ರತಾಪ್ ಸಿಂಗ್ ಥೋರಾಟ್, ಮಾರ್ಗದರ್ಶನದಲ್ಲಿ ಉಪಪೊಲೀಸ್ ಅಧೀಕ್ಷಕರ ನೇತೃತ್ವದ ತಂಡದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.





























