ಪುತ್ತೂರು: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೆಚ್.ಕೆ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಪುತ್ತೂರಿನಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ನ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು.
ಆ ಬಳಿಕ ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.




























