ಕಡಬ: ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಾದಕ್ಕೆ ತಾರ್ಕಿಕ ಅಂತ್ಯ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿ ನಿರ್ಣಯ ಕೈಗೊಳ್ಳಲಾಗಿದೆ.
ಶಾಲಾ ಅವಧಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸದಂತೆ ಸೂಚನೆ ಕೊಡಲಾಗಿದೆ. ಬಿಇಒ ಸೂಚನೆಗೆ ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಒಪ್ಪಿಕೊಂಡಿದ್ದು, ಇನ್ನು ಮುಂದೆ ಶಾಲೆಯಲ್ಲಿ ನಮಾಜ್ ಮಾಡಲ್ಲವೆಂದು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಸಭೆಯ ನಿರ್ಣಯದ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.