ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ನಿವಾಸ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಹಲವು ಸ್ಥಳಗಳಲ್ಲಿ ಮಹತ್ವದ ದಾಖಲೆಗಳಿಗಾಗಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ದಾವೂದ್ ಗ್ಯಾಂಗ್ನ ಹವಾಲಾ ನೆಟ್ವರ್ಕ್ ಮತ್ತು ನಾರ್ಕೋ-ಭಯೋತ್ಪಾದನೆ ಕುರಿತ ತನಿಖೆ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ದಾವೂದ್ನ ಭದ್ರಕೋಟೆ ನಾಗ್ಪಾಡ ಪ್ರದೇಶದ ಮೇಲೂ ಇಡಿ ದಾಳಿ ಆಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಇತ್ತೀಚೆಗೆ ಸಲ್ಲಿಸಿದ ವರದಿ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.