ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‍ನಲ್ಲಿ ಕರ್ತವ್ಯ ಮತ್ತು ನಿರ್ವಹಣೆಗೆ ಕೋರ್ಟ್ ಯಾವುದೇ ತಡೆಯಾಜ್ಞೆ ನೀಡಿಲ್ಲ. ಸಮಿತಿಯ ಆಡಳಿತಕ್ಕೆ ತಡೆಯಾಜ್ಞೆ ನೀಡದೆ ಇರುವುದರಿಂದ ಸಮಿತಿ ಸಂಪೂರ್ಣವಾಗಿ ಹಿಂದಿನಂತೆ ಆಡಳಿತ ನಡೆಸಲಿದೆ ಎಂದು ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ಹೇಳಿದರು.
ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ಷೇತ್ರಾಡಳಿತ ಸಮಿತಿಗೆ ಮತ್ತು ನಿತ್ಯ ಕಾರ್ಯನಿರ್ವಹಣೆಗೆ ತಡೆಯಾಜ್ಞೆ ನೀಡುವಂತೆ ಪುತ್ತೂರಿನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಶ್ರೀಧರ ಪೂಜಾರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಮಾರ್ಚ್ 8ರಂದು ಮಧ್ಯಂತರ ಆದೇಶ ನೀಡಿ ತಡೆಯಾಜ್ಞೆ ನೀಡಲು ನಿರಾಕರಿಸಿ, ಕ್ಷೇತ್ರಾಡಳಿತ ಸಮಿತಿಯ ಆಡಳಿತ ಮತ್ತು ನಿತ್ಯ ಕಾರ್ಯಗಳಿಗೆ ಅನುಮತಿ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ಪಿತಾಂಬರ ಹೆರಾಜೆ, ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಮತ್ತಿತರರು ಉಪಸ್ಥಿತರಿದ್ದರು.